Monday, August 15, 2011ಸಾಂಸ್ಕೃತಿಕ, ಕ್ರೀಡಾ, ಪರಂಪರಾಕೂಟ ಹಾಗೂ ಎನ್.ಎಸ್.ಎಸ್ ಚಟುವಟಿಕೆ ಸಮಾರಂಭಚಿಕ್ಕನಾಯಕನಹಳ್ಳಿ,ಆ.15 : ಸಕರ್ಾರಿ ಪ್ರಥಮ ದಜರ್ೆ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ ಪರಂಪರಾಕೂಟ ಹಾಗೂ ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಇದೇ 18ರ ಗುರುವಾರ ಬೆಳಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ. ಸಮಾರಂಭವನ್ನು ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದು ರಾಮಕೃಷ್ಣ ವಿವೇಕಾನಂದಾಶ್ರಮದ ಮುಖ್ಯಸ್ಥರಾದ ವೀರೇಶಾನಂದ ಸರಸ್ವತಿ ಸ್ವಾಮಿ ದಿವ್ಯ ಸಾನಿದ್ಯ ವಹಿಸಲಿದ್ದು ಶಾಸಕ ಸಿ.ಬಿ.ಸುರೇಶ್ಬಾಬು ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಂಶುಪಾಲ ಎ.ಎನ್.ವಿಶ್ವೇಶ್ವರಯ್ಯ ಸಮಾರಂಭದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು ಮುಖ್ಯ ಅತಿಥಿಗಳಾಗಿ ಪುರಸಭಾಧ್ಯಕ್ಷ ಸಿ.ಎಲ್.ದೊಡ್ಡಯ್ಯ, ಉಪಾಧ್ಯಕ್ಷ ಆರ್.ರವಿ(ಮೈನ್ಸ್) ಆಗಮಿಸುವರು.ಈ ಸಂದರ್ಭದಲ್ಲಿ ಪಾಂಡವಪುರ ವಿಜ್ಞಾನ ಕೇಂದ್ರದ ಜೆ.ಬಿ.ಸಂತೋಷ್ಕುಮಾರ್ ಪವಾಡ ರಹಸ್ಯ ಬಯಲು ವಿಶೇಷ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ಪ್ರಾಥಮಿಕ ಹಾಗೂ ಪ್ರೌಡಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟಚಿಕ್ಕನಾಯಕನಹಳ್ಳಿ,ಆ.15 : ತಾಲ್ಲೂಕು ಮಟ್ಟದ ಹಿರಿಯ ಪ್ರಾಥಮಿಕ ಪಾಠಶಾಲೆ ಹಾಗೂ ಪ್ರೌಡಶಾಲೆಗಳ ಕ್ರೀಡಾಕೂಟ ಸಮಾರಂಭವನ್ನು ಇದೇ 17 ಮತ್ತು 18 ರಂದು ಬೆಳಗ್ಗೆ 9ಕ್ಕೆ ಏರ್ಪಡಿಸಲಾಗಿದೆ.ಸಮಾರಂಭವನ್ನು ತಾಲ್ಲೂಕು ಕ್ರೀಡಾಂಗಣ ಹಾಗೂ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದು ತಾ.ಪಂ.ಅಧ್ಯಕ್ಷ ಜಿ.ಆರ್.ಸೀತಾರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದು ಶಾಸಕ ಸಿ.ಬಿ.ಸುರೇಶ್ಬಾಬು ಅಧ್ಯಕ್ಷತೆ ವಹಿಸಲಿದ್ದಾರೆ. ಪುರಸಭಾಧ್ಯಕ್ಷ ಸಿ.ಎಲ್.ದೊಡ್ಡಯ್ಯ ಧ್ವಜಾರೋಹಣ ನೆರವೇರಿಸಲಿದ್ದು ತಹಶೀಲ್ದಾರ್ ಎನ್.ಆರ್.ಉಮೇಶ್ಚಂದ್ರ ಕ್ರೀಡಾ ಜ್ಯೋತಿ ಸ್ವೀಕರಿಸಲಿದ್ದು ಇ.ಓ ಎನ್.ಎಂ.ದಯಾನಂದ್ ವಂದನಾ ಸ್ವೀಕರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾ.ಶಿ.ಇ ಉಪನಿದರ್ೇಶಕ ಬಿ.ಮೋಹನ್ಕುಮಾರ್, ಜಿ.ಪಂ.ಸದಸ್ಯರಾದ ಮಂಜುಳ ಗವಿರಂಗಯ್ಯ, ಜಾನಮ್ಮರಾಮಚಂದ್ರಯ್ಯ, ಲೋಹಿತಾರಂಗಸ್ವಾಮಿ, ನಿಂಗಮ್ಮರಾಮಯ್ಯ, ಎಚ್.ಬಿ.ಪಂಚಾಕ್ಷರಯ್ಯ, ತಾ.ಪಂ.ಉಪಾಧ್ಯಕ್ಷೆ ಬಿಬಿಪಾತಿಮ, ಪುರಸಭಾ ಉಪಾಧ್ಯಕ್ಷ ಆರ್.ರವಿ, ಜಿ.ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ಆರ್.ಪರಶಿವಮೂತರ್ಿ, ತಾ.ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ಹೆಚ್.ಎಂ.ಸುರೇಶ್, ಪ್ರೌ,ಮು.ಶಿ.ಸಂಘದ ಅಧ್ಯಕ್ಷ ಜಿ.ಕೃಷ್ಣಯ್ಯ, ಸಿ.ಪಿ.ಐ ಕೆ.ಪ್ರಭಾಕರ್, ಅಕ್ಷರ ದಾಸೋಹ ಸಹಾಯಕ ನಿದರ್ೇಶಕ ತಿಮ್ಮರಾಜು, ಶೋಭಾ ಸಿ.ಬಸವರಾಜು, ಉಪಸ್ಥಿತರಿರುವರು.