Monday, August 29, 2011



ಗ್ರಾಮೀಣ ಪ್ರದೇಶಗಳಲ್ಲಿ ಆಸ್ತಿ ತೆರಿಗೆ ಸಂಖ್ಯೆಗೆ ಪಡಿತರ ಚೀಟಿ ಸಂಖ್ಯೆಯನ್ನು ಹೊಂದಾಣಿಕೆ ಮಾಡಿಕೊಳ್ಳಿ : ತಹಶೀಲ್ದಾರ್ ಉಮೇಶ್ಚಂದ್ರ
ಚಿಕ್ಕನಾಯಕನಹಳ್ಳಿ,ಆ.29 : ಗ್ರಾಮೀಣ ಪ್ರದೇಶಗಳ ಪಡಿತರ ಚೀಟಿಗಳನ್ನು ಪಂಚಾಯ್ತಿಗಳಲ್ಲಿನ ಪಂಚತಂತ್ರ ವ್ಯವಸ್ಥೆಯಲ್ಲಿ, ಮನೆ ಸಂಖ್ಯೆಗೆ ಪಡಿತರ ಚೀಟಿ ಹೊಂದಾಣಿಕೆ ಮಾಡುವ ಕಾರ್ಯ ನಡೆಯುತ್ತಿದ್ದು ಪಡಿತರ ಚೀಟಿದಾರರು ಸೆಪ್ಟಂಬರ್ 4ರೊಳಗೆ ಈ ವ್ಯವಸ್ಥೆ ಹೊಂದಾಣಿಕೆ ಮಾಡಿಸಿಕೊಳ್ಳಬೇಕೆಂದು ತಹಶೀಲ್ದಾರ್ ಉಮೇಶ್ಚಂದ್ರ ತಿಳಿಸಿದ್ದಾರೆ. ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯ್ತಿಗೆ ಹೋಗಿ ಆಸ್ತಿ ತೆರಿಗೆ ಸಂಖ್ಯೆಗೆ ಪಡಿತರ ಚೀಟಿ ಸಂಖ್ಯೆಯನ್ನು ಹೊಂದಾಣಿಕೆ ಮಾಡಿಸಿಕೊಳ್ಳಬೇಕು ಇಲ್ಲದಿದ್ದಲ್ಲಿ ಅಂತಹ ಪಡಿತರ ಚೀಟಿಗಳಿಗೆ ಸೆಪ್ಟಂಬರ್ 2011ರ ಮಾಹೆಯಿಂದ ಪಡಿತರ ಹಾಗೂ ಸೀಮೆಎಣ್ಣೆ ಹಂಚಿಕೆ ಸ್ಥಗಿತಗೊಳಿಸಲಾಗುತ್ತದೆ ಆದ್ದರಿಂದ ಪಡಿತರ ಚೀಟಿದಾರರು ಸೆಪ್ಟಂಬರ್ 4ರೊಳಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯ್ತಿಗೆ ಹೋಗಿ ಮನೆ ಸಂಖ್ಯೆಗೆ ಪಡಿತರ ಚೀಟಿ ಸಂಖ್ಯೆಯನ್ನು ಕಡ್ಡಾಯವಾಗಿ ಹೊಂದಾಣಿಕೆ ಮಾಡಿಕೊಳ್ಳಲು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.