Thursday, March 31, 2016

ಚಿ.ನಾ.ಹಳ್ಳಿ ಪುರಸಭೆಗೆ ನೂತನ ಅಧ್ಯಕ್ಷರಾಗಿ ಸಿ.ಟಿ.ದಯಾನಂದ್,  ಉಪಾಧ್ಯಕ್ಷರಾಗಿ ಇಂದಿರಾಪ್ರಕಾಶ್
                              
ಚಿಕ್ಕನಾಯಕನಹಳ್ಳಿ,: ಪಟ್ಟಣದ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಂಬಂಧ  ಎರಡನೇ ಅವಧಿಗೆ ಬಂದ ಮೀಸಲಾತಿ ಅನ್ವಯ ನಡೆದ ಚುನಾವಣೆಯಲ್ಲಿ  ಅಧ್ಯಕ್ಷರಾಗಿ ಸಿ.ಟಿ.ದಯಾನಂದ್ ಹಾಗೂ ಉಪಾಧ್ಯಕ್ಷರಾಗಿ ಇಂದಿರಾಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರ ಆಯ್ಕೆಗೆ ಮೀಸಲಾತಿಯು ಸಾಮಾನ್ಯ ಕ್ಷೇತ್ರಕ್ಕೆ ಮೀಸಲಿದುದ್ದರಿಂದ  19ನೇ ವಾಡರ್್ನ ಸಿ.ಟಿ ದಯಾನಂದ್ ಅಧ್ಯಕ್ಷರಾಗಿ, 8ನೇ ವಾಡರ್್ನ ಇಂದಿರಾಪ್ರಕಾಶ್ ಉಪಾಧ್ಯಕ್ಷರಾಗಿ ಆವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಹಾಗೂ  ತಹಶೀಲ್ದಾರ್ ಗಂಗೇಶ್ ಘೋಷಿಸಿದರು.
ಅಧ್ಯಕ್ಷ ಹುದ್ದೆಗೆ ಆಕಾಂಕ್ಷಿಯಾಗಿದ್ದ ಸಿ.ಟಿ ದಯಾನಂದ್ ಎರಡು ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷೆ ಇಂದಿರಾಪ್ರಕಾಶ್ ಒಂದು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸರಿಯಾಗಿರುವುದರಿಂದ ಚುನಾವಣೆಯಲ್ಲಿ ಈ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಹಸಿಲ್ದಾರ್ ಆರ್.ಗಂಗೇಶ್ ಸಭೆಗೆ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಸಿ.ಬಿ ಸುರೇಶ್ಬಾಬು, ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲೇಶಯ್ಯ ಪುರಸಭಾ ಮುಖ್ಯಾಧಿಕಾರಿ ಪಿ.ಶಿವಪ್ರಸಾದ್. ಹಾಗೂ ಪುರಸಭಾ ಸದಸ್ಯರು ಉಪಸ್ಥಿತರಿದ್ದರು. ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಅವರ ಬೆಂಬಲಿಗರು ಪಟಾಕಿ ಹೊಡೆದು ಸಿಹಿ ಹಂಚಿ ಸಂಭ್ರಮಿಸಿದರು. 
ನೂತನ ಪುರಸಭಾಧ್ಯಕ್ಷ ಸಿ.ಟಿ ದಯಾನಂದ್ ಮಾತನಾಡಿ,  ಪಟ್ಟಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಘನತಾಜ್ಯ ವಿಲೇವಾರಿಗೆ ಹೆಚ್ಚಿನ ಆಧ್ಯತೆ ನೀಡುವುದಾಗಿ ತಿಳಿಸಿದ ಅವರು,  ಎಲ್ಲ ನೌಕರರನ್ನು ಹಾಗೂ ಪುರಸಭಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಊರಿನ ಅಭಿವೃದ್ದಿಗೆ ಶ್ರಮಿಸುವುದಾಗಿ ತಿಳಿಸಿದ ಅವರು,  ಪುರಸಭೆಯಲ್ಲಿ ಸಾರ್ವಜನಿಕ ಕೆಲಸಕ್ಕೆ ಲಂಚಗುಳಿತನ ನಡೆದರೆ ತಮ್ಮ ಗಮನಕ್ಕೆ ತರುವಂತೆ ಸಾರ್ವಜನಿಕರಿಗೆ ತಿಳಿಸಿದ್ದಾರೆ.


No comments:

Post a Comment