ಮಂಡಲ ಬಿ.ಜೆ.ಪಿ.ಯಲ್ಲಿರುವ ಗೊಂದಲ ನಿವಾರಣೆಯಾಗಲಿ: ಮೈಸೂರಪ್ಪ
ಚಿಕ್ಕನಾಯಕನಹಳ್ಳಿ,ಜು.19 : ಮಂಡಲ ಬಿ.ಜೆ.ಪಿ.ಪಕ್ಷ, ಕಾರ್ಯಕರ್ತರನ್ನು ನಿರ್ಲಕ್ಷಿಸುತ್ತಿದೆ ಇದರಿಂದ ಪಕ್ಷದ ಸಂಘಟನೆ ದುರ್ಬಲವಾಗುತ್ತಿದೆ ಎಂದು ಮಂಡಲ ಬಿ.ಜೆ.ಪಿ. ಉಪಾಧ್ಯಕ್ಷ ಎಂ.ಎಸ್.ಮೈಸೂರಪ್ಪ ಆರೋಪಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಪ್ರಥಮ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿ ತಾಲ್ಲೂಕು ಪಂಚಾಯಿತಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ, ಆದರೂ ಗೆದ್ದಂತಹ ಜನಪ್ರತಿನಿಧಿಗಳನ್ನು ಕರೆದು ಅಭಿನಂದಿಸುವ ಕನಿಷ್ಠ ಸೌಜನ್ಯವು ಪಕ್ಷದ ಮುಖಂಡರಿಗಿಲ್ಲ ಎಂದರು.
ತಾಲ್ಲೂಕಿಗೆ ನೀರಾವರಿ ಯೋಜನೆ ಜಾರಿಗೊಳಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಲು ತಾಲ್ಲೂಕು ಸಮಿತಿ ಸಭೆ ಕರೆದು ನಿಶ್ಚಯ ಮಾಡಿ ಪಕ್ಷದ ವತಿಯಿಂದ ನಿಯೋಗ ಕರೆದೊಯ್ಯಬೇಕಾಗಿತ್ತು, ಆದರೆ ತಾಲ್ಲೂಕು ಅಧ್ಯಕ್ಷರು ಪಕ್ಷಪಾತ ಧೋರಣೆಯಿಂದ ತಮಗೆ ಬೇಕಾದವರನ್ನು ಕರೆದುಕೊಂಡು ಮುಖ್ಯಮಂತ್ರಿಗಳ ಭೇಟಿಗೆ ಹೋಗಿದ್ದಾರೆ ಎಂದು ಆರೋಪಿಸಿರುವ ಅವರು ತಾಲ್ಲೂಕಿಗೆ ಮಂಜೂರಾಗಿರುವ ನೀರಾವರಿ ಯೋಜನೆಯು ಕ್ಷೇತ್ರದ ಕಾರ್ಯಕರ್ತರಿಗೆ ಹರ್ಷ ತಂದಿದೆ, ವಿಶೇಷವಾಗಿ ಶೆಟ್ಟಿಕೆರೆ ಹೋಬಳಿ ಕಾರ್ಯಕರ್ತರ ಪಕ್ಷ ಸಂಘಟನೆಗೆ ಹೆಚ್ಚು ಉತ್ಸಾಹತಂದಿದೆ ಎಂದಿದ್ದಾರೆ.
ಗೋಷ್ಠಿಯಲ್ಲಿ ಜಿ.ಪಂ,ಸದಸ್ಯ ಹೆಚ್.ಬಿ.ಪಂಚಾಕ್ಷರಿ, ತಾ.ಪಂ.ಸದಸ್ಯ ರಮೇಶ್ಕುಮಾರ್, ಬೂತ್ ಕಮಿಟಿ ಅಧ್ಯಕ್ಷ ಶಂಕರಪ್ಪ, ಪ್ರಭು, ಮಹೇಶ್, ಶಿವಶಂಕರ್, ನಾಗರಾಜು ಉಪಸ್ಥಿತರಿದ್ದರು.
ತಾಲೂಕಿನಲ್ಲಿ ಕಾಂಗ್ರೆಸ್ ಸಂಘಟಿಸುವಂತಹ ಅಬ್ಯಾಥರ್ಿಯನ್ನು ಹುಡುಕುತ್ತಿದ್ದೇವೆ: ಕೆ.ಎನ್.ಆರ್.
ಚಿಕ್ಕನಾಯಕನಹಳ್ಳಿ,ಜು.23 : ತಾಲ್ಲೂಕಿನಲ್ಲಿ ಪಕ್ಷ ಸಂಘಟಿಸುವಂತಹ ಚಾಕಚಕ್ಯತೆ ಇರುವ ಅಭ್ಯಥರ್ಿಯನ್ನು ಹುಡುಕುತ್ತಿದ್ದೇವೆ ಎಂದರಲ್ಲದೆ, ಕಾಂಗ್ರೇಸ್ ನಡೆಗೆ ಜನರ ಕಡೆಗೆ ಕಾರ್ಯಕ್ರಮವನ್ನು ತಾಲ್ಲೂಕಿನಲ್ಲಿ ಆಗಸ್ಟ್ 15ರೊಳಗೆ ನಡೆಯಲಿದ್ದು ಯುವ ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡಲಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಮುಖಂಡ ಹಾಗೂ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಿಂದ ರಾಜ್ಯಮಟ್ಟದವರೆಗೆ ಸಂಘಟಿಸುವ ಸಲುವಾಗಿ ಕಾಂಗ್ರೆಸ್ ನಡಿಗೆ ಜನರ ಬಳಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಗ್ರಾಮೀಣ ಮಟ್ಟದಲ್ಲಿ ನಮ್ಮ ಪಕ್ಷವನ್ನು ಈ ನಡಿಗೆ ಬಲಿಷ್ಠಗೊಳಿಸುತ್ತಿದ್ದು ಜಿಲ್ಲೆಯಲ್ಲಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ್ರವರು ನಮಗೆ ಜವಾಬ್ದಾರಿ ವಹಿಸಿದ್ದಾರೆ ಎಂದ ಅವರು, ಈಗಾಗಲೇ ಜಿಲ್ಲೆಯಲ್ಲಿ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಮಧುಗಿರಿ, ತುರುವೇಕೆರೆ, ಕುಣಿಗಲ್, ತಿಪಟೂರು ತಾಲ್ಲೂಕುಗಳಲ್ಲ ಕಾರ್ಯಕ್ರಮ ಯಶಸ್ವಿಯಾಗಿದೆ ತಾಲ್ಲೂಕಿನಲ್ಲಿ ಆಗಸ್ಟ್ 15ರೊಳಗೆ ಕಾರ್ಯಕ್ರಮ ನಡೆಯಲಿದ್ದು
ಗೋಷ್ಠಿಯಲ್ಲಿ ಮಾಜಿ ಶಾಸಕ ಬಿ.ಲಕ್ಕಪ್ಪ, ಬ್ಲಾಕ್ ಸಮಿತಿ ಅಧ್ಯಕ್ಷ ಸಿ.ಬಸವರಾಜು, ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ಬೀರಲಿಂಗಯ್ಯ ಉಪಸ್ಥಿತರಿದ್ದರು.

No comments:
Post a Comment